ಎಸ್ಸಿ, ಎಸ್ಟಿ ಸಮುದಾಯವನ್ನು ಬಿಜೆಪಿ ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

171

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರವನ್ನು ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿರುವ ಬಿಜೆಪಿ ಸರ್ಕಾರ, ಈ ಹೆಚ್ಚಳ ಅನುಷ್ಠಾನದ ಪ್ರಕ್ರಿಯೆ ಬಗ್ಗೆ ವಿವರ ನೀಡದೆ ಮೌನವಾಗಿದ್ದುಕೊಂಡು ಎಸ್ಸಿ, ಎಸ್ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ ಎಂದು, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಎಸ್ಸಿ, ಎಸ್ಟಿ ಮೀಸಲಾತಿಯ ಹೆಚ್ಚಳಕ್ಕಾಗಿ ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ ಕಳಿಸಬೇಕಾಗುತ್ತದೆ. ಕೇಂದ್ರ ಸರ್ಕಾರ ಸಂಸತ್ ನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆಯಬೇಕು. ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ ನಂತರ ಮೀಸಲಾತಿ ಹೆಚ್ಚಳ ಜಾರಿಯಾಗಲಿದೆ.

ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಟ್ಟು ಮೀಸಲಾತಿ ಶೇ.50 ಮೀರುವಂತಿಲ್ಲ. ಇದರಿಂದಾಗಿ ರಾಜ್ಯದ ಒಟ್ಟು ಮೀಸಲಾತಿ ಶೇ.56 ಆಗಲಿದೆ. ಕಾನೂನಿನ ಬಿಕ್ಕಟ್ಟಿನ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!