ಜಡೇಜಾ ಮಾರಕ ಬೌಲಿಂಗ್.. ಆಸೀಸ್ ವಿರುದ್ಧ ಗೆದ್ದ ಭಾರತ

177

ಪ್ರಜಾಸ್ತ್ರ ಕ್ರೀಡಾ ಸುದ್ದಿ

ದೆಹಲಿ: ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ 4 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. 2ನೇ ಇನ್ನಿಂಗ್ಸ್ ಆಡಿದ ಭಾರತ 4 ವಿಕೆಟ್ ಕಳೆದುಕೊಂಡು 118 ರನ್ ಗಳಿಸಿ ಗೆಲುವಿನ ದಡ ಸೇರಿತು.

ಚೇತೇಶ್ವರ್ ಪೂಜಾರ ಅಜೇಯ 31, ಸಿರಿಕಾರ್ ಭರತ್ ಅಜೇಯ 23 ರನ್ ಗಳಿಸಿದರು. ನಾಯಕ ರೋಹಿತ್ ಶರ್ಮಾ 31, ಕೆ.ಎಲ್ ರಾಹುಲ್ 1, ವಿರಾಟ್ ಕೊಹ್ಲಿ 20 ರನ್ ಗಳಿಸಿ ಔಟ್ ಆದರು. ಆಸೀಸ್ ಪರ ಲಾಯನ್ 2, ಟುಡ್ 1 ವಿಕೆಟ್ ಪಡೆದರು.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 263 ರನ್ ಗಳಿಸಿತ್ತು. ಭಾರತ 262 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟ್ ಮಾಡಿದ ಕಮಿನ್ಸ್ ಪಡೆ ಕೇವಲ 113 ರನ್ ಗಳಿಗೆ ಆಲೌಟ್ ಆಯಿತು. ಹೀಗಾಗಿ ಜಸ್ಟ್ 115 ರನ್ ಗಳ ಗುರಿ ನೀಡಲಾಗಿತ್ತು. ಇದನ್ನು ಭಾರತ ಭಾರಿಸಿ 2 ದಿನ ಮೊದಲ ಪಂದ್ಯ ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಜಡೇಜಾ ಮೊದಲ ಇನ್ನಿಂಗ್ಸ್ ನಲ್ಲಿ 3, 2ನೇ ಇನ್ನಿಂಗ್ಸ್ ನಲ್ಲಿ ಬರೋಬ್ಬರಿ 7 ವಿಕೆಟ್ ಪಡೆದು ಮಿಂಚಿದರು. ಅಶ್ವಿನ್ 6 ವಿಕೆಟ್, ಮೊಹಮ್ಮದ್ ಶಮಿ 4 ವಿಕೆಟ್ ಪಡೆದರು. ಆಸ್ಟ್ರೇಲಿಯಾ ಪರ ಲಾಯನ್ 7 ವಿಕೆಟ್ ಪಡೆದರು.




Leave a Reply

Your email address will not be published. Required fields are marked *

error: Content is protected !!