ಮೊದಲ ದ್ವಿಶತಕ ಬಾರಿಸಿದ ಯಶಸ್ವಿ ಜೈಸ್ವಾಲ್

179

ಪ್ರಜಾಸ್ತ್ರ ಕ್ರೀಡಾ ಸುದ್ದಿ

ವಿಶಾಖಪಟ್ಟಣ: ಇಲ್ಲಿನ ವೈ.ಎಸ್ ರಾಜಶೇಖರ್ ರೆಡ್ಡಿ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಮೊದಲ ದ್ವಿಶತಕ ಬಾರಿಸಿದ್ದಾನೆ.

ಶುಕ್ರವಾರದ ಆಟದ ಅಂತ್ಯಕ್ಕೆ 179 ರನ್ ಗಳಿ ಕ್ರಿಸ್ ನಲ್ಲಿದ್ದ. ಇಂದು ಅದೇ ಆಟ ಮುಂದುವರೆಸಿ ದ್ವಿಶತಕ ಬಾರಿಸುವ ಮೂಲಕ ದಾಖಲೆ ಬರೆದ. 209 ರನ್ ಗಳಿಸಿ ಜೇಮ್ಸ್ ಆಂಡರ್ಸನ್ ಬೌಲಿಂಗ್ ನಲ್ಲಿ ಔಟ್ ಆದ.

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 396 ರನ್ ಗಳಿಗೆ ಆಲೌಟ್ ಆಗಿದೆ. ಗಿಲ್ 34, ರಜತ್ ಪತೆದಾರ್ 32 ರನ್ ಬಿಟ್ಟರೆ ಉಳಿದವರು ಹೀಗೆ ಬಂದು ಹಾಗೇ ಹೋದರು. ಆಂಡರ್ಸನ್ 3, ಶೋಹಿಬ್ ಬಸೀರ್ 3, ರಿಹಾನ್ ಅಹ್ಮದ್ 3 ವಿಕೆಟ್ ಪಡೆದು ಮಿಂಚಿದರು. ಇಂಗ್ಲೆಂಡ್ ಬ್ಯಾಟಿಂಗ್ ಆರಂಭಿಸಿದೆ.




Leave a Reply

Your email address will not be published. Required fields are marked *

error: Content is protected !!