246 ರನ್ ಗಳಿಗೆ ಆಂಗ್ಲರನ್ನು ಕಟ್ಟಿ ಹಾಕಿದ ಭಾರತ

146

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಹೈದ್ರಾಬಾದ್: ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯು ಇಂದಿನಿಂದ ಆರಂಭವಾಗಿದೆ. ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಮೈದಾನದಲ್ಲಿ ಮೊದಲ ಪಂದ್ಯ ನಡೆಯುತ್ತಿದ್ದು, ಮೊದಲ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ 246 ರನ್ ಗಳಿಗೆ ಆಲೌಟ್ ಆಗಿದೆ. ಭಾರತ 119 ರನ್ ಗಳಿಗೆ 1 ವಿಕೆಟ್ ಕಳೆದುಕೊಂಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟ್ರೋಕ್ ಲೆಕ್ಕಾಚಾರವನ್ನು ಟೀಂ ಇಂಡಿಯಾ ಬೌಲರ್ ಗಳು ಉಲ್ಟಾ ಮಾಡಿದರು. ನಾಯಕ ಸ್ಟ್ರೋಕ್ 70 ರನ್ ಗಳನ್ನು ಹೊರತು ಪಡಿಸಿದರೆ ಉಳಿದವರು ಯಾರು 40 ರನ್ ಗಳನ್ನು ಸಹ ಬಾರಿಸಲಿಲ್ಲ.

ಜಡೇಜಾ, ಅಶ್ವಿನ್ ಜೋಡಿಗೆ ಇಂಗ್ಲೆಂಡ್ ಬ್ಯಾಟಿಂಗ್ ಪಡೆ ಬೆಂಡಾಯ್ತು. ಈ ಜೋಡಿ ತಲಾ 3 ವಿಕೆಟ್ ಪಡೆಯಿತು. ಬೂಮ್ರಾ, ಅಕ್ಷರ್ ಪಟೇಲ್ ಸಹ ತಲಾ 2 ವಿಕೆಟ್ ಪಡೆದು ಮಿಂಚಿದರು. ಬ್ಯಾಟಿಂಗ್ ಆರಂಭಿಸಿರುವ ಭಾರತ 1 ವಿಕೆಟ್ ಕಳೆದುಕೊಂಡಿದೆ. ನಾಯಕ ರೋಹಿತ್ ಶರ್ಮಾ 24 ರನ್ ಗಳಿಸಿ ಜಾಕ್ ಲೀಚ್ ಬೌಲಿಂಗ್ ನಲ್ಲಿ ಔಟ್ ಆದರು. ಯುವ ಆಟಗಾರ ಯಶಸ್ವಿ ಜೈಸ್ವಾಲ್ 76, ಗಿಲ್ 14 ರನ್ ಗಳೊಂದಿಗೆ ಆಡುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!