ಟೆಸ್ಟ್ ಸರಣಿ ಭಾರತ ಕೈ ವಶ

491

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಮುಂಬೈ: ಇಲ್ಲಿನ ವಾಖೇಂಡಾ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 372 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ ಸರಣಿ ಕೈ ವಶಪಡಿಸಿಕೊಂಡಿದೆ.

ಬಿಸಿಸಿ ಕೃಪೆ

ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಸರಣಿ ಗೆಲುವು ಸಾಧಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 325 ರನ್ ಗಳಿಸಿತ್ತು. ಇದನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ 62 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ 2ನೇ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ನಷ್ಟಕ್ಕೆ 276 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡು 540 ರನ್ ಟಾರ್ಗೆಟ್ ನೀಡಿತ್ತು. ಇದನ್ನು ಚೇಂಸ್ ಮಾಡಿದ ನ್ಯೂಜಿಲೆಂಡ್ ತಂಡ 167ಕ್ಕೆ ಆಲೌಟ್ ಆಗುವ ಮೂಲಕ ಸೋಲು ಒಪ್ಪಿಕೊಂಡಿತು.




Leave a Reply

Your email address will not be published. Required fields are marked *

error: Content is protected !!