ಸೌಥ್ ಆಫ್ರಿಕಾಗೆ ಶರಣಾದ ಟೀಂ ಇಂಡಿಯಾ

205

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಸೆಂಚುರಿಯನ್ ಮೈದಾನದಲ್ಲಿ ನಡೆದ ಮೊದಲ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಅನುಭವಿಸಿದೆ. 32 ರನ್ ಗಳಿಂದ ಸೌಥ್ ಆಫ್ರಿಕಾ ಇನ್ನಿಂಗ್ಸ್ ಗೆಲುವು ಸಾಧಿಸಿದೆ.

ಮೊದಲ ಇನ್ನಿಂಗ್ಸ್ ನಲ್ಲಿ ರೋಹಿತ್ ಶರ್ಮಾ ಬಳಗ 245 ರನ್ ಗಳಿಗೆ ಆಲೌಟ್ ಆಗಿತ್ತು. ದಕ್ಷಿಣ ಆಫ್ರಿಕಾ 408 ರನ್ ಗಳಿಗೆ ತನ್ನ ಪ್ರಥಮ ಇನ್ನಿಂಗ್ಸ್ ಮುಗಿಸಿತು. ಹೀಗಾಗಿ 163 ರನ್ ಗಳ ಮುನ್ನಡೆ ಸಾಧಿಸಿತು. 2ನೇ ಇನ್ನಿಂಗ್ಸ್ ಆಡಿದ ಭಾರತ ಕೇವಲ 131 ರನ್ ಗಳಿಗೆ ಆಲೌಟ್ ಆಗುವ ಮೂಲಕ ಸೋಲು ಕಂಡಿತು.

ವಿರಾಟ್ ಕೊಹ್ಲಿ 76 ರನ್ ಗಳು ಬಿಟ್ಟರೆ ಉಳಿದವರು ಹೀಗೆ ಬಂದು ಹಾಗೇ ಹೋದರು. ಆಫ್ರಿಕಾ ಪರ ಬರ್ಗರ್ 4, ಜಾನ್ಸನ್ 3 ವಿಕೆಟ್ ಪಡೆದು ಮಿಂಚಿದರು. ರಬಡಾ 2 ವಿಕೆಟ್ ಪಡೆದರು.




Leave a Reply

Your email address will not be published. Required fields are marked *

error: Content is protected !!