ಇನ್ನಿಂಗ್ಸ್ ಗೆಲುವು ದಾಖಲಿಸಿದ ಭಾರತ

190

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಮೊಹಾಲಿ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ ಇನ್ನಿಂಗ್ಸ್ ಗೆಲುವು ದಾಖಲಿಸಿದೆ. ಭಾರತ ನೀಡಿದ 574 ರನ್ ಗಳನ್ನು ಬೆನ್ನು ಹತ್ತಿದ ಲಂಕಾ ಪಡೆ ಮೊದಲ ಇನ್ನಿಂಗ್ಸ್ ನಲ್ಲಿ 174 ರನ್ ಗಳಿಗೆ ಆಲೌಟ್ ಆಯ್ತು.

ಮತ್ತೆ ಲಂಕಾಗೆ ಬ್ಯಾಟಿಂಗ್ ನೀಡಲಾಯಿತು. ಆಗಲೂ 178 ರನ್ ಗಳಿಗೆ ಆಲೌಟ್ ಆಯಿತು. ಹೀಗಾಗಿ ಭಾರತ ತಂಡ 222 ರನ್ ಗಳ ಇನ್ನಿಂಗ್ಸ್ ಗೆಲುವು ಸಾಧಿಸಿದೆ. ಇದರೊಂದಿಗೆ 2 ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ.

ಇನ್ನು ಆಲ್ ರೌಂಟರ್ ರವೀಂದ್ರ ಜಡೇಜಾ ಬ್ಯಾಟಿಂಗ್ ನಲ್ಲಿ 175 ರನ್ ನಾಟೌಟ್ ಹಾಗೂ ಮೊದಲ ಇನ್ನಿಂಗ್ಸ್ ನಲ್ಲಿ 5 ವಿಕೆಟ್, 2ನೇ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆದು ಮಿಂಚಿದರು. ಹೀಗಾಗಿ ಜಡೇಜಾ ಪ್ಲೇಯರ್ ಆಫ್ ದಿ ಮ್ಯಾಚ್ ಆದರು.




Leave a Reply

Your email address will not be published. Required fields are marked *

error: Content is protected !!