ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು

175

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಬ್ರಿಡ್ಜ್ ಟೌನ್ ನಲ್ಲಿ ನಡೆದ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋತಿದೆ. ಟಾಸ್ ಗೆದ್ದು ಬೌಲಿಂಗ್ ಮಾಡಿದ ವೆಸ್ಟ್ ಇಂಡೀಸ್, ಭಾರತ ತಂಡವನ್ನು 181 ರನ್ ಗಳಿಗೆ ಕಟ್ಟಿ ಹಾಕಿತು. ನಂತರ ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡ 36.4 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

ಭಾರತ ಪರ ಇಶಾನ್ ಕಿಶನ್ 55, ಶುಭಗ್ಮನ್ ಗಿಲ್ 34 ರನ್ ಬಿಟ್ಟರೆ ಉಳಿದಂತೆ ಎಲ್ಲರೂ ಹಿಂಗೆ ಬಂದು ಹಾಗೇ ಹೋದವರಂತೆ ಮಾಡಿದರು. ನಾಯಕ ಹಾರ್ದಿಕ್ ಪಾಂಡ್ಯೆ 7, ಸಂಜು ಸ್ಯಾಮ್ಸನ್ 9, ಸೂರ್ಯಕುಮಾರ್ ಯಾದವ್ 24, ಜಡೇಜಾ 10, ಅಕ್ಷರ್ ಪಟೇಲ್ 1 ರನ್ ಗಳಿಸಿದರು.

ವೆಸ್ಟ್ ಇಂಡೀಸ್ ಪರ ಮೋತಿ, ಶಫರ್ಡ್ ತಲಾ 3 ವಿಕೆಟ್ ಪಡೆದು ಮಿಂಚಿದರು. ಜೋಸಫ್ 2, ಜೊಯಾಡನ್, ಯಾನಿಕ್ ತಲಾ 1 ವಿಕೆಟ್ ಪಡೆದರು.

ಹೋಪ್ ಅಜೇಯ 63, ಕ್ರಿಟಿ ಅಜೇಯ 48 ರನ್ ಗಳಿಂದಾಗಿ ಕೆರಿಬಿಯನ್ ಪಡೆ 6 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿತು. ಈ ಮೂಲಕ 3 ಪಂದ್ಯಗಳಲ್ಲಿ 1-1 ಸಮಬಲ ಸಾಧಿಸಿವೆ. ಟೀಂ ಇಂಡಿಯಾ ಪರ ಶಾರ್ದೂಲ್ ಠಾಕೂರ್ 3 ವಿಕೆಟ್ ಪಡೆದು ಸಂಭ್ರಮಿಸಿದರು. ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.




Leave a Reply

Your email address will not be published. Required fields are marked *

error: Content is protected !!