ಕೊಹ್ಲಿ 25 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ 5ನೇ ಆಟಗಾರ

135

ಪ್ರಜಾಸ್ತ್ರ ಕ್ರೀಡಾ ಸುದ್ದಿ

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ 2ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಮೊದಲ ಇನ್ನಿಂಗ್ಸ್ ಆಡುತ್ತಿರುವ ಭಾರತ ಉತ್ತಮ ಸ್ಕೋರ್ ಮಾಡುತ್ತಿದೆ. ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ.

ಒಂದು ಕಡೆ 500ನೇ ಅಂತಾರಾಷ್ಟ್ರೀಯ ಪಂದ್ಯವಾಡುತ್ತಿರುವ ಕೊಹ್ಲಿ, ಮತ್ತೊಂದು ಕಡೆ 25 ಸಾವಿರ ರನ್ ದಾಟಿದ ವಿಶ್ವದ 5ನೇ ಆಟಗಾರರಾಗಿದ್ದಾರೆ. 161 ಬೌಲ್ ಗಳಿಂದ 87 ರನ್ ಗಳಿಸಿ ಅಜೇಯರಾಗಿ ಆಡುತ್ತಿದ್ದಾರೆ. ಕೊಹ್ಲಿಯಿಂದ ಮತ್ತೊಂದು ಶತಕ ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ.

ಸಚಿನ್ ತಂಡೂಲ್ಕರ್ 664 ಪಂದ್ಯಗಳಿಂದ 30,067 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಕುಮಾರ್ ಸಂಗ್ಕಾರ್ 594 ಪಂದ್ಯಗಳಿಂದ 28,016 ರನ್ ಗಳಿಸಿದ್ದಾರೆ. ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ 560 ಪಂದ್ಯಗಳಿಂದ 27,483 ರನ್ ಗಳಿಸಿದ್ದಾರೆ. ಶ್ರೀಲಂಕಾದ ಮಹೇಲಾ ಜಯವರ್ಧನೆ 652 ಪಂದ್ಯಗಳಿಂದ 25,957 ರನ್ ಗಳಿಸಿ 4ನೇ ಸ್ಥಾನದಲ್ಲಿದ್ದಾರೆ. 25,548 ರನ್ ಗಳೊಂದಿಗೆ ಕೊಹ್ಲಿ 5ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ. ಇನ್ನು ಕೆಲ ವರ್ಷಗಳಲ್ಲಿ 3 ಅಥವ 2ನೇ ಸ್ಥಾನಕ್ಕೆ ಬರುವುದು ಖಚಿತ ಎನ್ನಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!