ಟೆಸ್ಟ್ ಸರಣಿ ಗೆದ್ದ ಭಾರತದ ಮತ್ತೊಂದು ಸಾಧನೆ

262

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಅಹಮದಾಬಾದ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ 4ನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಪಡೆ 25 ರನ್ ಗಳ ಇನ್ನಿಂಗ್ಸ್ ಗೆಲುವು ದಾಖಲಿಸಿದೆ. ಈ ಮೂಲಕ ಭಾರತ 3-1 ಅಂತರದಿಂದ ಟೆಸ್ಟ್ ಸರಣಿ ವಶ ಪಡಿಸಿಕೊಂಡಿದೆ.

ಮೊದಲ ಇನ್ನಿಂಗ್ಸ್ ನಲ್ಲಿ 160 ರನ್ ಮುನ್ನಡೆ ನೀಡಿತ್ತು. ಈ ರನ್ ಚೇಸ್ ಮಾಡಿದ ರೂಟ್ ಪಡೆ ಕೇವಲ 135 ರನ್ ಗಳಿಗೆ ಆಲೌಟ್ ಆಗುವ ಮೂಲಕ ಇನ್ನಿಂಗ್ಸ್ ಸೋಲು ಅನುಭವಿಸಿದೆ. ಅಕ್ಷರ ಪಟೇಲ ಹಾಗೂ ಅಶ್ವಿನ್ ತಲಾ 5 ವಿಕೆಟ್ ಪಡೆಯುವ ಮೂಲಕ ಆಂಗ್ಲರ ಪಾಲಿಗೆ ಮತ್ತೆ ಸಿಂಹಸ್ವಪ್ನವಾದರು.

ಇನ್ನು ರವಿಚಂದ್ರನ್ ಅಶ್ವಿನ್ ಸರಣಿ ಶ್ರೇಷ್ಠ ಪ್ರಶಸ್ತಿ ಹಾಗೂ ರಿಷಬ್ ಪಂತ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು. ಈ ಸರಣಿ ಗೆದ್ದ ಭಾರತ ತಂಡ, ಚೊಚ್ಚಟ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ತಲುಪಿದೆ. ಜಾರ್ಡ್ಸ್ ನಲ್ಲಿ ಜೂನ್ ನಲ್ಲಿ ನಡೆಯಲಿರುವ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೆಣಸಾಟ ನಡೆಸಲಿದೆ.




Leave a Reply

Your email address will not be published. Required fields are marked *

error: Content is protected !!