ನಾಡಿನ ತುಂಬಾ ಸಂಭ್ರಮದ ಸ್ವಾತಂತ್ರೋತ್ಸವ

371

ಇಂದು ದೇಶಾದ್ಯಂತ ಸಂಭ್ರಮ ಸಡಗರದಿಂದ ಸ್ವಾತಂತ್ರೋತ್ಸವನ್ನ ಸಂಭ್ರಮ ಸಡಗರದಿಂದ ಆಚರಿಸಲಾಯ್ತು. ಅದೆ ರೀತಿ ಕರುನಾಡಿನ ತುಂಬಾ ಎಲ್ಲೆಡೆ ತಿರಂಗದ ಕಂಪು ತುಂಬಿಕೊಂಡಿತ್ತು. ಅದರ ವರದಿ ಇಲ್ಲಿದೆ ನೋಡಿ.

ಬೆಂಗಳೂರು: ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪನವರು ಧ್ವಜಾರೋಹಣ ನೆರವೇರಿಸುವ ಮೂಲಕ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಆಚರಿಸಲಾಯ್ತು. ಈ ವೇಳೆ ಮಾತ್ನಾಡಿದ ಅವರು, 2014ರಲ್ಲಿ ಜಾರಿ ಮಾಡಿದ ಕೈಗಾರಿಕೆ ನೀತಿ ಸೆಪ್ಟಂಬರ್ ಗೆ ಮುಗಿಯಲಿದೆ ಅಂತಾ ತಿಳಿಸಿದ್ರು. ನೂತನ ಕೈಗಾರಿಕೆ ನೀತಿ ಜಾರಿಗೆ ತರುವ ಮೂಲಕ ತಂತ್ರಜ್ಞಾನವನ್ನೊಳಗೊಂಡ ಹೆಚ್ಚು ಉದ್ಯೋಗ ಸೃಷ್ಟಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ರು.

ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು 73ನೇ ಸ್ವಾಂತತ್ರ್ಯ ದಿನಾಚರಣೆಯನ್ನ ಸಂಭ್ರಮದಿಂದ ಆಚರಿಸಿದ್ರು. ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವ ಹೆಚ್. ಆಂಜನೇಯ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ರು.

ಮಂಡ್ಯ: ಮಂಡ್ಯ ಜಿಲ್ಲೆ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮದಲ್ಲಿ ಭಾಗವಹಿಸಿದ್ದ ಸಂಸದೆ ಸುಮಲತಾ ಅಂಬರೀಶ ಅವರು, ಧ್ವಜಾರೋಹಣ ನೆರವೇರಿಸಿದ್ರು. ನಂತ್ರ ಗಾಂಧಿ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದ್ರು.

ಬಾಗಲಕೋಟೆ: ಜಿಲ್ಲೆಯ ಪ್ರವಾಹಪೀಡಿತ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಸಂತ್ರಸ್ತರು ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ರು. ವಿಶ್ವಭಾರತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆಯಲ್ಲಿ ಆಶ್ರಯ ಪಡೆದಿರುವ ಜನರು ಬಾವುಟಕ್ಕೆ ಗೌರವ ನಮನ ಸಲ್ಲಿಸಿದ್ರು.

ಬೆಳಗಾವಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದಿಂದ ಸ್ವಾತಂತ್ರೋತ್ಸವ ಆಚರಿಸಲಾಯ್ತು. ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ಸರ್ಕಾರದ ಸಂದೇಶ ತಿಳಿಸಿದ್ರು.




Leave a Reply

Your email address will not be published. Required fields are marked *

error: Content is protected !!