ಪ್ರಧಾನಿ ಮೋದಿಗೆ ಅವರದೆ ಶೈಲಿಯಲ್ಲಿ ಕುಟುಕಿದ ಸಿಎಂ

201

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪ್ರತಿಪಕ್ಷಗಳು ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂದು ನಾಮಕರಣ ಮಾಡಿಕೊಂಡಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಕಟು ಟೀಕೆ ಮಾಡಿದ್ದರು. ಈಸ್ಟ್ ಇಂಡಿಯಾ ಕಂಪನಿ, ಉಗ್ರ ಸಂಘಟನೆಗಳ ಹೆಸರಿನಲ್ಲಿ ಇಂಡಿಯನ್ ಮುಜಾಹಿದ್ದೀನ್, ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾ ಅನ್ನೋ ಹೆಸರಿದೆ ಎಂದಿದ್ದರು.

ಪ್ರಧಾನಿ ಮೋದಿಯವರು ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಧಾನಿ ಮೋದಿಯವರೆ ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೆ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನು ಬದಲಾಯಿಸುವಿರಾ ಅಂತಾ ಪ್ರಶ್ನಿಸಿದ್ದಾರೆ.

ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ? ಜೊತೆಗೆ ಮೋದಿ ಉಪನಾಮ ಕುರಿತಾಗಿ ರಾಹುಲ್ ಗಾಂಧಿ ವಿರುದ್ಧ ತೆಗೆದುಕೊಂಡ ಕ್ರಮಗಳ ಕುರಿತು ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!