ಹಿರಿಯ ಸಾಹಿತಿ ಚಂಪಾ ಕಣ್ಮರೆ: ಗಣ್ಯರ ಸಂತಾಪ

454

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಬೆಂಗಳೂರು: ನಾಡಿನ ಖ್ಯಾತ ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ(ಚಂಪಾ) ಇಂದು ಬೆಳಗ್ಗೆ ನಿಧನರಾಗಿದ್ದಾರೆ. 83 ವರ್ಷದ ಚಂಪಾ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರಾಗಿದ್ದರು, ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರೂ ಆಗಿದ್ದರು. ಇವರ ನಿಧನಕ್ಕೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ.

ಕವಿತೆ, ನಾಟಕ, ವಿಮರ್ಶೆ, ಲೇಖನದ ಜೊತೆಗೆ ವೈಚಾರ ಪ್ರಜ್ಞೆಯ ಹೋರಾಟಗಳಲ್ಲಿ ಸಾಕಷ್ಟು ಸಕ್ರಿಯವಾಗಿ ತೊಡಗಿಸಿಕೊಂಡವರು. ಕನ್ನಡಪರ ಚಳವಳಿಗಳಲ್ಲಿ ಮುಂಚುಣಿಯಲ್ಲಿದ್ದವರು. ಗೋಕಾಕ್ ಚಳವಳಿಯಲ್ಲಿ ಸಕ್ರಿಯರಾಗಿದ್ದವರು, ರಾಜ್ಯದಲ್ಲಿ ಕನ್ನಡ ಮಾಧ್ಯಮದ ಕಲಿಕೆಗೆ ಒತ್ತು ನೀಡಿದರು.

ಹಾವೇರಿಯ ಜಿಲ್ಲೆಯ ಚಂದ್ರಶೇಖರ್ ಪಾಟೀಲ್, ಚಂಪಾ ಎಂದೇ ಖ್ಯಾತಿ ಗಳಿಸಿದವರು. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಶುರು ಮಾಡಿ ಚೇರ್ಮನ್ ಆಗಿಯೂ ಸೇವೆ ಸಲ್ಲಿಸಿದವರು. ಸಂಕ್ರಮಣ ಸಾಹಿತ್ಯ ಪತ್ರಿಕೆಯ ಮೂಲಕ ಅಕ್ಷರ ಲೋಕದಲ್ಲಿ ಸಾಕಷ್ಟು ಸಾಹಸ ಮಾಡಿದವರು. ಇವರ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಅವರ ಒಡನಾಡಿಗಳು, ಅಭಿಮಾನಿಗಳು, ಶಿಷ್ಯರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!