‘ಭಾರತೀಯ ವಿಜ್ಞಾನ ಕಾಂಗ್ರೆಸ್’ನಲ್ಲಿ ಮೋದಿ

340

ಬೆಂಗಳೂರು: ಇಂದಿನಿಂದ 5 ದಿನಗಳ ಕಾಲ ನಡೆಯುವ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ನಡೆಯಲಿದೆ. ಕೃಷಿ ವಿಶ್ವವಿದ್ಯಾಲಯದಲ್ಲಿಂದು ನಡೆಯುವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಇಂದು ಬೆಳಗ್ಗೆ 10ಕ್ಕೆ ಪ್ರಧಾನಿ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

‘ವಿಜ್ಞಾನ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ’ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ನಡೆಯುತ್ತಿದೆ. ಕೃಷಿ ಕ್ಷೇತ್ರದ ಸಮಸ್ಯೆ, ಹವಾಮಾನದ ಬದಲಾವಣೆ, ಕೃಷಿಯಲ್ಲಿಯಾಗಿರುವ ವೈಜ್ಞಾನಿಕ ಸಂಶೋಧನೆ ಸೇರಿದಂತೆ ಸಾಕಷ್ಟು ವಿಚಾರಗಳ ಕುರಿತು ಚರ್ಚೆ, ವಿಚಾರ ವಿನಿಮಯ ನಡೆಯಲಿದೆ. ಐದು ದಿನಗಳ ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು, 150ಕ್ಕೂ ಹೆಚ್ಚು ಸಂಘ, ಸಂಸ್ಥೆಗಳು ಭಾಗವಹಿಸಲಿದ್ದಾರೆ. 24 ದೇಶಗಳ 74 ಮಂದಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!