ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ಹಾಕಿ ಅಂಪೈರ್ ಆಗಿದ್ದ ಅನುಪಮಾ ಪುಚ್ಚಿಮುಂಡ(41) ಅವರು ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ. ಕರೋನಾದಿಂದಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ.
ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಮೂಲದವರಾದ ಅನುಪಮಾ, ಭಾರತದ ಮೊದಲ ಮಹಿಳಾ ಹಾಕಿ ಅಂಪೈರ್. ಅಲ್ದೇ, 50 ಅಂತಾರಾಷ್ಟ್ರೀಯ ಹಾಕಿ ಆಟಗಳಿಗೆ ಅಂಪೈರ್ ಆಗಿದ್ದರು.