ಇಂದಿರಾ ಕ್ಯಾಂಟೀನ್ ಆಹಾರದಲ್ಲಿ ಹುಳಗಳು ಪತ್ತೆ

400

ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಗ್ರಾಹಕರಿಗೆ ನೀಡಿದ್ದ ಉಪ್ಪಿಟ್ಟಿನಲ್ಲಿ ಹುಳಗಳು ಪತ್ತೆಯಾಗಿವೆ. ಎಂದಿನಂತೆ ಇಂದು ಗ್ರಾಹಕರು ಇಂದಿರಾ ಕ್ಯಾಂಟೀನ್ ಗೆ ತಿಂಡಿ ತಿನ್ನಲು ತೆರಳಿದಾಗ, ಗ್ರಾಹಕರಿಗೆ ನೀಡಿದ ಉಪಹಾರದಲ್ಲಿ ಹುಳಗಳು ಪತ್ತೆಯಾಗಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ.

ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಸುಸಜ್ಜಿತ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ತಿನ್ನುವ ಆಹಾರದಲ್ಲಿ ಹುಳಗಳು ಪತ್ತೆಯಾಗ್ತಿವೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!