ಸ್ಫೋಟ ಪ್ರಕರಣದ ತನಿಖೆ ಸಿಸಿಬಿಗೆ

92

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ ಎಂದು, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!