ಪ್ರಜಾಸ್ತ್ರ ಸುದ್ದಿ
2022ನೇ ಸಾಲಿನ ಐಪಿಎಲ್ ಟೂರ್ನಿ ಶುರುವಾಗಬೇಕಿದೆ. ಕಳೆದ ಶನಿವಾರ ಹಾಗೂ ಭಾನುವಾರ ಹರಾಜು ಪ್ರಕ್ರಿಯೆ ಮುಗಿದಿದೆ. 12.25 ಕೋಟಿ ರೂಪಾಯಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪಾಲಾಗಿರುವ ಶ್ರೇಯಸ್ ಅಯ್ಯರ್ ನನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
2020ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ಯಶಸ್ವಿಯಾಗಿದ್ದರು. ಅಂದು ಫೈನಲ್ ವರೆಗೂ ತಂಡವನ್ನು ತೆಗೆದುಕೊಂಡು ಹೋಗಿದ್ದರು. ಇದೀಗ ಕೆಕೆಆರ್ ತಂಡ ನಾಯಕನಾಗಿ ಆಯ್ಕೆ ಮಾಡಲಾಗಿದೆ.