ಸಂಸದೆ ಸುಮಲತಾ ಬಿಜೆಪಿ ಸೇರ್ತಾರಾ?

73

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಹಾಗೂ ಅವರ ಪುತ್ರ ಅಭಿಷೇಕ್ ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಅನ್ನೋದು ಹಲವು ದಿನಗಳಿಂದ ಚರ್ಚೆಯಲ್ಲಿದೆ. ಸೋಮವಾರ ಸುಮಲತಾ ಅವರ ಆಪ್ತ ಹಾಗೂ ಕೆಪಿಸಿಸಿ ಮಾಜಿ ಸದಸ್ಯ ಸಚ್ಚಿದಾನಂದ ಸೇರಿ ಅನೇಕರು ಬಿಜೆಪಿ ಸರ್ಪಡೆಯಾಗಿದ್ದಾರೆ.

ಮಂಡ್ಯ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುವ ಸಂಬಂಧ ಹಲವು ರೀತಿಯ ರಣತಂತ್ರಗಳನ್ನು ಹೆಣೆಯಲಾಗುತ್ತಿದೆ. ಇದರ ಭಾಗವಾಗಿ ಒಕ್ಕಲಿಗ ಸಮುದಾಯದ ಮತಗಳನ್ನು ಹೆಚ್ಚಿನ ಮಟ್ಟದಲ್ಲಿ ಸೆಳೆಯಲು ಸಂಸದೆ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿಗೆ ಸೆಳೆಯುವ ಯತ್ನಗಳು ನಡೆಯುತ್ತಿವೆ.

ಸುಮಲತಾ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚ್ಚಿದಾನಂದ ಸೇರಿ ಅನೇಕರು ಬಿಜೆಪಿ ಸೇರಿರುವುದು ನೋಡಿದರೆ, ಸಂಸದೆಯವರು ಶೀಘ್ರದಲ್ಲಿ ಬಿಜೆಪಿ ಸೇರುತ್ತಾರೆ ಅನ್ನೋ ಚರ್ಚೆ ಜೋರಾಗಿದೆ. ಇದಕ್ಕೆಲ್ಲ ಶೀಘ್ರದಲ್ಲಿ ಉತ್ತರ ಸಿಗಲಿದೆ.
Leave a Reply

Your email address will not be published. Required fields are marked *

error: Content is protected !!