ಬ್ರೇಕಿಂಗ್ ನ್ಯೂಸ್: ಸಿಲಿಕಾನ್ ಸಿಟಿಯಲ್ಲಿ ಐಸಿಸ್ ಉಗ್ರನ ಬಂಧನ

339

ಬೆಂಗಳೂರು: ಅಲ್ ಹಿಂದ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಐಸಿಸಿ ಉಗ್ರನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಉಗ್ರನನ್ನು ಫಜೀ ಉರ್ ರೆಹಮಾನ್ ಎಂದು ಗುರುತಿಸಲಾಗಿದೆ.

ಅಲ್ ಹಿಂದ್ ಉಗ್ರ ಸಂಘಟನೆಯಲ್ಲಿ ಸಕ್ರಿಯನಾಗಿದ್ದ 36 ವರ್ಷದ ಫಜೀ ಉರ್ ರೆಹಮಾನ್ ನ್ನು ಡಿಜಿ ಹಳ್ಳಿ ವ್ಯಾಪ್ತಿಯ ಟ್ಯಾನಿಟಿರಿ ರೋಡ್ ನಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಎನ್ಐಎ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.

ಕಳೆದ 2 ದಿನಗಳಿಂದ 19 ಕಡೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ರು. ಉಗ್ರರ ಸುಳಿವು ಆಧರಿಸಿ ನಡೆಸಿದ ದಾಳಿಯಲ್ಲಿ ಇಂದು ಬೆಂಗಳೂರಿನಲ್ಲಿ ಐಸಿಸ್ ಉಗ್ರನ ಬಂಧನವಾಗಿದೆ.




Leave a Reply

Your email address will not be published. Required fields are marked *

error: Content is protected !!