ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಜಯ

393

ಭಾರತಕ್ಕೆ ಇದು ನಿಜಕ್ಕೂ ಖುಷಿಯ ಸಂಗತಿ. ರಾಜತಾಂತ್ರಿಕ ವಿಚಾರದಲ್ಲಿ ಭಾರತಕ್ಕೆ ಜಯ ಸಿಕ್ಕಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಎರಡು ವರ್ಷಗಳ ಕಾಲ ತಾತ್ಕಾಲಿಕ ಸದಸ್ಯತ್ವಕ್ಕೆ ಅನುಮೋದನೆ ಸಿಕ್ಕಿದೆ.

ಚೀನಾ, ಪಾಕಿಸ್ತಾನ ಸೇರಿದಂತೆ 55 ರಾಷ್ಟ್ರಗಳು ಇದಕ್ಕೆ ಒಪ್ಪಿಗೆ ನೀಡಿವೆ. ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ಸೈಯದ್ ಅಕ್ಬರುದ್ದೀನ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಭಾರತದ ಸ್ಪರ್ಧೆಯನ್ನ ಬೆಂಬಲಿಸಿದ ಎಲ್ಲ ರಾಷ್ಟ್ರಗಳಿಗೂ ಧನ್ಯವಾದಗಳನ್ನ ಸಲ್ಲಿಸಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವದಲ್ಲಿ ಚೀನಾ, ಅಮೆರಿಕಾ, ರಷ್ಯಾ, ಬ್ರಿಟನ್ ಹಾಗೂ ಫ್ರಾನ್ಸ್ ದೇಶಗಳಿವೆ. ಖಾಯಂ ಸದಸ್ಯತ್ವ ಪಡೆಯಲು ಭಾರತಕ್ಕೆ ಅರ್ಹತೆಯಿದೆ ಅಂತಾ ಮೊದಲಿನಿಂದಲೂ ವಾದಿಸುತ್ತಾ ಬಂದಿದೆ.

ಆಯ್ಕೆ ಹೇಗೆ?

193 ಸದಸ್ಯ ರಾಷ್ಟ್ರಗಳ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಪ್ರತಿ ವರ್ಷ ಐದು ರಾಷ್ಟ್ರಗಳನ್ನ ತಾತ್ಕಾಲಿಕ ಸದಸ್ಯತ್ವಕ್ಕೆ ಚುನಾವಣೆ ಮೂಲಕ ಆಯ್ಕೆ ಮಾಡುತ್ತೆ. ಇದು ಎರಡು ವರ್ಷಗಳ ಅವಧಿಯಾಗಿರುತ್ತೆ. 2021-22ರಲ್ಲಿ ತೆರವಾಗುವ ಐದು ಸ್ಥಾನಗಳಿಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ.


TAG


Leave a Reply

Your email address will not be published. Required fields are marked *

error: Content is protected !!