ನನ್ನ ಆಯ್ಕೆ ಬಡವರ ಕನಸಿಗೆ ಸಾಕ್ಷಿ: ರಾಷ್ಟ್ರಪತಿ ಮುರ್ಮು

201

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ್ ಅವರು ಪ್ರಮಾಣ ವಚನ ಬೋಧಿಸಿದರು. ಈ ವೇಳೆ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಅಧಿಕಾರ ವಹಿಸಿಕೊಂಡು ಮಾತನಾಡಿದ ನೂತನ ರಾಷ್ಟ್ರಪತಿ ಮುರ್ಮು, ಬಡವರು ಕನಸು ಕಾಣುವುದಷ್ಟೇ ಅಲ್ಲ. ಅದನ್ನು ಸಾಕಾರ ಮಾಡಬಹುದು ಅನ್ನೋದಕ್ಕೆ ನನ್ನ ಆಯ್ಕೆ ಸಾಕ್ಷಿಯಾಗಿದೆ ಎಂದರು. ಸ್ವತಂತ್ರ ಭಾರತದಲ್ಲಿ ಜನಿಸಿದವರಲ್ಲಿ ರಾಷ್ಟ್ರಪತಿ ಹುದ್ದೆಗೆ ಏರಿದ ಮೊದಲಿಗಳು ನಾನು. ಈ ಜವಾಬ್ದಾರಿ ನಿಭಾಯಿಸಲು ನಿಮ್ಮ ನಂಬಿಕೆ, ಬೆಂಬಲ ನನಗೆ ಪ್ರಮುಖ ಶಕ್ತಿಯಾಗಿದೆ ಎಂದರು.




Leave a Reply

Your email address will not be published. Required fields are marked *

error: Content is protected !!