Search

ಭಾರತದಲ್ಲಿನ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ

294

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಭಾರತದಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಮಂಗಳವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಬೈ ಹಾಗೂ ದೆಹಲಿಯಲ್ಲಿರುವ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಈ ದಾಳಿಗೆ ಕುರಿತಂತೆ ಕಾಂಗ್ರೆಸ್ ಹಾಗೂ ಟಿಎಂಸಿ ಸಂಸದೆ ಮಾಹು ಮೊಯಿತ್ರಾ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಅದಾನಿ ಕುರಿತು ಹಿಡನ್ ಬರ್ಗ್ ವರದಿ ಬಂದಿದೆ. ಐಟಿ ಅಧಿಕಾರಿಗಳು ಅದಾನಿ ಕಂಪನಿಗಳ ಮೇಲೆ ಏನಾದರೂ ದಾಳಿ ಮಾಡುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಬಿಬಿಸಿ ಇತ್ತೀಚೆಗೆ ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದ ಸಂದರ್ಭದಲ್ಲಿ 2002ರಲ್ಲಿ ನಡೆದ ಗೋದ್ರಾ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಚಿತ್ರವೊಂದನ್ನು ನಿರ್ಮಿಸಿ ಬಿಡುಗಡೆ ಮಾಡಿದೆ. ಆದರೆ, ಭಾರತದಲ್ಲಿ ಅದಕ್ಕೆ ಕೇಂದ್ರ ಸರ್ಕಾರ ನಿಷೇಧಿಸಿದೆ. ಈಗ ಬಿಬಿಸಿಯ ಕಚೇರಿಗಳ ಮೇಲಿನ ಐಟಿ ದಾಳಿ ಬಗ್ಗೆ ವಿಪಕ್ಷಗಳು ವಾಗ್ದಾಳಿ ನಡೆಸಿವೆ.


TAG


Leave a Reply

Your email address will not be published. Required fields are marked *

error: Content is protected !!