ಪ್ರಜಾಸ್ತ್ರ ಸುದ್ದಿ
ಹೈದ್ರಾಬಾದ್: ನವೆಂಬರ್ 30ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಖಮ್ಮಂ ಜಿಲ್ಲೆಯ ಪಲೈರ್ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ರೆಡ್ಡಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಳೆದ ವಾರ ಮಹೇಶ್ವರಂ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಲಕ್ಷ್ಮಾ ರೆಡ್ಡಿ ಹಾಗೂ ಬಡಂಗಪೇಟೆ ಮಹಾನಗರ ಪಾಲಿಕೆ ಮೇಯರ್ ಚಿಗುರಿಂಥ ಪರಿಜಾತ ನರಸಿಂಹ ರೆಡ್ಡಿ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.
ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ಹಾಗೂ ಆಡಳಿತರೂಢ ಬಿಆರ್ ಎಸ್ ಈ ರೀತಿ ದಾಳಿ ನಡೆಸುತ್ತಿವೆ ಎಂದು ವಾಗ್ದಾಳಿ ನಡೆಸಲಾಗಿದೆ. ಐಟಿ ದಾಳಿ ಖಂಡಿಸಿ ಖಮ್ಮಂನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.