ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಸುಮಾರು 25ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತೆರಿಗೆ ವಂಚನೆ ಮಾಡುತ್ತಿದ್ದ ಚಿನ್ನದ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ.
ಯಶವಂತಪುರ, ಚಿಕ್ಕಪೇಟೆ, ಜಯನಗರ ಸೇರಿದಂತೆ 25ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದು, ಜೊತೆಗೆ ಅಂಗಡಿಗಳ ಮಾಲೀಕರ ಮನೆಗಳ ಮೇಲೂ ರೇಡ್ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.