ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಜೆಡಿಎಸ್ ಮುಖಂಡ ಹಾಗೂ 2023ರ ಚುನಾವಣಾ ಅಭ್ಯರ್ಥಿ ಮನೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಭಾಕರ್ ರೆಡ್ಡಿ ಮನೆ ಐಟಿ ದಾಳಿ ನಡೆದಿದೆ.
ಮೈಲಸಂದ್ರದಲ್ಲಿರುವ ಮನೆ, ಎಚ್ಎಚ್ಆರ್ ಲೇಔಟ್ ನಲ್ಲಿರುವ ಕಚೇರಿ ಸೇರಿ ಮೂರು ಕಡೆ ದಾಳಿ ನಡೆಸಲಾಗಿದೆ. ಆದಾಯ ತೆರಿಗೆ ದಾಖಲೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದ್ದಾರೆ.