ಜೈನ ಮುನಿ ಹತ್ಯೆ ಖಂಡಿಸಿ ಎಲ್ಲೆಡೆ ಪ್ರತಿಭಟನೆ

181

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಸೋಮವಾರ ಪ್ರತಿಭಟನೆ ನಡೆಸಲಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ಹುಕ್ಕೇರಿ, ಕಾಗವಾಡ, ಅಥಣಿ ಸೇರಿದಂತೆ ಸುತ್ತಲಿನ ಜನರು ಆಗಮಿಸಿ ಪ್ರತಿಭಟನೆ ನಡೆಸಿದರು. ಬೆಳಗಾವಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಜೈನ ಸಮುದಾಯದವರು ಕಾರ್ಯಸೌಧಕ್ಕೆ ತೆರಳಿ ಎಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.

ಇದರಂತೆ ಧಾರವಾಡದಲ್ಲಿ ಜಿಲ್ಲಾಧಿಕಾರಿ ಕಚೇರಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹಂತಕರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿದರು. ಇನ್ನು ಬೈಲಹೊಂಗಲದಲ್ಲಿಯೂ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಲಾಯಿತು. ಇದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೈನ ಸಮುದಾಯದವರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.




Leave a Reply

Your email address will not be published. Required fields are marked *

error: Content is protected !!