ಜೇಮ್ಸ್ ಚಿತ್ರದ ವಿಚಾರದಲ್ಲಿ ಬಿಜೆಪಿಗೆ ಮಾನವೀತೆಯಿಲ್ಲ: ಡಿಕೆಶಿ

196

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ನಟ ಪುನೀತ್ ರಾಜಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಥಿಯೇಟರ್ ನಿಂದ ತೆಗೆಯುವಂತೆ ಬಿಜೆಪಿ ಶಾಸಕರು ಒತ್ತಡ ಹಾಕುತ್ತಿರುವುದು ಸರಿಯಲ್ಲ. ಬಿಜೆಪಿಗೆ ಮಾನವೀಯತೆ ಇಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ನನಗೆ ಹಲವು ಚಿತ್ರ ಮಂದಿರಗಳ ಮಾಲೀಕರು ಕರೆ ಮಾಡಿ ಹೇಳುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ಅಪಾರ ಜನರನ್ನು ಸಂಪಾದಿಸಿದ ಖ್ಯಾತ ನಟ ಅವರು. ಅವರ ಕೊನೆಯ ಚಿತ್ರಕ್ಕೆ ತೊಂದರೆ ಕೊಡುತ್ತಿರುವ ಬಿಜೆಪಿಯವರಿಗೆ ಮಾನವೀಯತೆ ಇರಬೇಕಿತ್ತು. ಕಾಶ್ಮೀರ ಫೈಲ್ಸ್ ಚಿತ್ರಕ್ಕೆ ಯಾವುದೇ ರೀತಿಯ ಪ್ರಚಾರ ಪಡೆದುಕೊಳ್ಳಲಿ. ತಮ್ಮ ಪಕ್ಷಕ್ಕೆ ಅನುಕೂಲವಾಗುವಂತೆ ಚಿತ್ರಕಥೆ ಮಾಡಿಸಿದ್ದಾರೆ ಎಂದು ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!