ಪ್ರಜಾಸ್ತ್ರ ಸಿನಿಮಾ ಡೆಸ್ಕ್
ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಈಗಾಗ್ಲೇ ರಿಲೀಸ್ ಆಗಿ ಸಕ್ಸಸ್ ಕಂಡಿದೆ. ಅಪ್ಪುಗೆ ಸಹೋದರ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಧ್ವನಿ ನೀಡಿದ್ದಾರೆ. ಆದರೆ, ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್ ಏನಂದರೆ, ಅವರ ಧ್ವನಿಯಲ್ಲೇ ಜೇಮ್ಸ್ ಚಿತ್ರ ರಿಲೀಸ್ ಆಗುತ್ತಿರುವುದು.
ಈ ಬಗ್ಗೆ ಸಣ್ಣದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇಡೀ ಚಿತ್ರ ಅಪ್ಪು ವಾಯ್ಸ್ ನಲ್ಲಿ ಬಂದರೆ ಅಭಿಮಾನಿಗಳಿಗೆ ಮತ್ತಷ್ಟು ಖುಷಿಯಾಗಲಿದೆ.