ಜೇಮ್ಸ್ ಟೀಸರ್ ಔಟ್

463

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಜೇಮ್ಸ್ ಚಿತ್ರದ ಟೀಸರ್ ರಿಲೀಸ್ ಆಗಿದೆ. ಇದು ಅಪ್ಪು ನಟನೆಯ ಕೊನೆಯ ಚಿತ್ರವಾಗಿದೆ. ಹೃದಯಾಘಾತದಿಂದ ಅಪ್ಪು ನಿಧನದಿಂದಾಗಿ ಇಡೀ ದೇಶವೇ ಮುರುಗಿತು. ಈಗ ಅವರ ಕೊನೆಯ ಚಿತ್ರ ರಿಲೀಸ್ ಗೆ ರೆಡಿಯಾಗಿದ್ದು, ಅದಕ್ಕೂ ಮೊದ್ಲು ಟೀಸರ್ ಬಿಡುಗಡೆ ಮಾಡಲಾಗಿದೆ.

ಚೇತನ್ ಕುಮಾರ್ ನಿರ್ದೇಶನದ ಜೇಮ್ಸ್ ಚಿತ್ರದಲ್ಲಿ ಅಪ್ಪು ಸಿಕ್ಕಾಪಟ್ಟೆ ಡಿಫರೆಂಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದೇನು ಕಾಕತಾಳಿಯವೋ ದುರಂತವೋ ಗೊತ್ತಿಲ್ಲ. ಅಪ್ಪು ಕೊನೆಯ ಚಿತ್ರದಲ್ಲಿ ಸಹೋದರರಾದ ಶಿವಣ್ಣ, ರಾಘಣ್ಣ ಸಹ ಕಾಣಿಸಿಕೊಂಡಿದ್ದಾರೆ. ಅಪ್ಪುಗೆ ಜೋಡಿಯಾಗಿ ಪ್ರಿಯಾ ಆನಂದ್ ಇದ್ದಾರೆ.

ಶರತ್ ಕುಮಾರ್, ಸಾಧು ಕೋಕಿಲಾ, ಚಿಕ್ಕಣ್ಣ, ಅನು ಪ್ರಭಾಕರ್, ಸುಚೇಂದ್ರ ಪ್ರಸಾದ್ ಸೇರಿದಂತೆ ಬಹುದೊಡ್ಡ ತಾರಾಬಳಗವಿದೆ. ಚರಣ್ ರಾಜ್ ಮ್ಯೂಸಿಕ್ ಇದೆ. ಕಿಶೋರೆ ಪತಿಕೊಂಡ ನಿರ್ಮಾಣದಲ್ಲಿ ಚಿತ್ರ ಮೂಡಿ ಬಂದಿದೆ. ಪಿಆರ್ ಕೆ ಆಡಿಯೋ ರೈಟ್ಸ್ ಪಡೆದಿದೆ. ಮಾರ್ಚ್ 17ರಂದು ಜೇಮ್ಸ್ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಹೀಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!