ಇಂದಿನಿಂದ ಜಮಖಂಡಿ ಅರ್ಧ ಬಂದ್

383

ಪ್ರಜಾಸ್ತ್ರ ಸುದ್ದಿ

ಜಮಖಂಡಿ: ಕರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಅರ್ಧ ದಿನ ಬಂದ್ ಮಾಡಲಾಗ್ತಿದೆ. ಅಂದ್ರೆ, ಮಧ್ಯಾಹ್ನ 2 ಗಂಟೆಯಿಂದ ಬಂದ್ ಗೆ ಆದೇಶಿಸಲಾಗಿದೆ.

ಜುಲೈ 21ರಿಂದ ಪ್ರತಿ ದಿನ ಮಧ್ಯಾಹ್ನ 2 ಬಳಿಕ ಸಂಪೂರ್ಣ ಲಾಕ್ ಡೌನ್ ಮಾಡಲಾಗ್ತಿದೆ. ತಾಲೂಕಿನ್ಯಾದಂತ ಕರೋನಾ ಪ್ರಕರಣಗಳು ಹೆಚ್ಚಾಗ್ತಿದ್ದು, ಅದನ್ನ ನಿಯಂತ್ರಣಕ್ಕೆ ತರುವ ಸಂಬಂಧ ಜುಲೈ 19ರಂದು ಜಿಲ್ಲಾಧಿಕಾರಿ ಜೊತೆ ಚರ್ಚಿಸಲಾಗಿತ್ತು.

ಇದೀಗ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಘಂಟೆ ತನ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದ್ದು, ಇದಾದ ಬಳಿಕ ತಾಲೂಕು ಬಂದ್ ಮಾಡ್ತಿರುವ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸಬೇಕೆಂದು ಕೇಳಿಕೊಳ್ಳಲಾಗಿದೆ.




Leave a Reply

Your email address will not be published. Required fields are marked *

error: Content is protected !!