370 ವಿಧಿ ರದ್ದು ನಿರ್ಧಾರ ಎತ್ತಿ ಹಿಡಿದ ಸುಪ್ರೀಂ

234

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕಣಿವೆ ನಾಡು ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಕಾಯ್ದೆ 370 ರದ್ದುಗೊಳಿಸಿ ಆಗಸ್ಟ್ 5, 2019ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದನ್ನು ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಇಂದು ತೀರ್ಪು ಪ್ರಕಟವಾಗಿದ್ದು, ಕೇಂದ್ರದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಜಮ್ಮು-ಕಾಶ್ಮೀರಕ್ಕೆ ಶೀಘ್ರವೇ ರಾಜ್ಯ ಸ್ಥಾನಮಾನ ನೀಡುವುದು, ಸೆಪ್ಟೆಂಬರ್ 30, 2024ರೊಳಗೆ ವಿಧಾನಸಭಾ ಚುನಾವಣೆ ನಡೆಸಲು ಚುನಾವಣೆ ಆಯೋಗಕ್ಕೆ ಸೂಚಿಸಲಾಗುವುದು ಎಂದು ತೀರ್ಪಿನಲ್ಲಿ ಹೇಳಲಾಗಿದೆ. 370ನೇ ವಿಧಿ ರದ್ದುಗೊಳಿಸಲು ರಾಷ್ಟ್ರಪತಿಗಳು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ ಅಂತಾ ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.




Leave a Reply

Your email address will not be published. Required fields are marked *

error: Content is protected !!