ಸೂಕ್ತ ಸಮಯದಲ್ಲಿ ಜಮ್ಮು-ಕಾಶ್ಮೀರಗೆ ರಾಜ್ಯ ಸ್ಥಾನಮಾನ

268

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕಣಿವೆ ನಾಡು ಜಮ್ಮು-ಕಾಶ್ಮೀರಗೆ ಸೂಕ್ತ ಸಮಯದಲ್ಲಿ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ ಶಾ ಹೇಳಿದ್ದಾರೆ. ನಾವು ಜಮ್ಮು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಕೊಡುವುದಿಲ್ಲವೆಂದು ಎಲ್ಲಿಯೂ ಹೇಳಿಲ್ಲ. ಅದೆಲ್ಲವೂ ಊಹಾಪೋಹವೆಂದು ಸಂಸತ್ ನಲ್ಲಿ ಹೇಳಿದ್ರು.

ಜಮ್ಮು-ಕಾಶ್ಮೀರ ಪುನರ್ ರಚನೆ ತಿದ್ದುಪಡಿ 2021ರ ಬಗ್ಗೆ ಸಾಕಷ್ಟು ಗೊಂದಲಗಳು ಮೂಡಿವೆ. ರಾಜ್ಯ ಸ್ಥಾನಮಾನಕ್ಕೂ ಮಸೂದೆಗೂ ಸಂಬಂಧವಿಲ್ಲ. ಹಾಗಂತ ನಾವು ಎಲ್ಲಿಯೂ ಬರೆದಿಲ್ಲ. ಸೂಕ್ತ ಸಮಯದಲ್ಲಿ ನೀಡಬೇಕಾದ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದರು.




Leave a Reply

Your email address will not be published. Required fields are marked *

error: Content is protected !!