370 ರದ್ದು ಸೇರಿ ವಿವಿಧ ಅರ್ಜಿಗಳ ವಿಚಾರಣೆ

351

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ನೀಡಿದ್ದ 370ನೇ ವಿಧಿ ರದ್ದತಿ ಸಿಂಧುತ್ವ ಅರ್ಜಿ ಸೇರಿದಂತೆ ವಿವಿಧ ಅರ್ಜಿಗಳ ವಿಚಾರಣೆಯನ್ನ ಸುಪ್ರೀಂಕೋರ್ಟ್ ಇಂದು ನಡೆಸಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ ಗೊಗಾಯ್ ಅವರ ನೇತೃತ್ವದ ನ್ಯಾಯಮೂರ್ತಿ ಎಸ್.ಎ ಬೋಬ್ಡೆ, ನ್ಯಾಯಮೂರ್ತಿ ಎಸ್ ನಜೀರ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದೆ.

730ನೇ ವಿಧಿ ರದ್ದು ಮಾಡಿದ ಕೇಂದ್ರ ಸರ್ಕಾರದ ನಿರ್ಧಾರದ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ, ವಿಶೇಷ ಸ್ಥಾನಮಾನ ರದ್ದಾದ ಬಳಿಕ ನಾಯಕರನ್ನ ಗೃಹಬಂಧನದಲ್ಲಿಟ್ಟಿದ್ದು, ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಿದ್ದು ಸೇರಿದಂತೆ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಅನೇಕ ಅರ್ಜಿಗಳ ವಿಚಾರಣೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!