ಜನಸ್ಪಂದನ ಕಾರ್ಯಕ್ರಮ, 3 ತಿಂಗಳಲ್ಲಿ ಅರ್ಜಿ ಇತ್ಯರ್ಥಕ್ಕೆ ಸೂಚನೆ

133

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಸ್ಪಂದನ ಕಾರ್ಯಕ್ರಮಕ್ಕೆ ಸಾವಿರಾರು ಅರ್ಜಿಗಳು ಬಂದಿವೆ. ಜನಸ್ಪಂದನ 2.0 ಕಾರ್ಯಕ್ರಮಕ್ಕೆ 10 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ರಾಜ್ಯದ ಮೂಲೆ ಮೂಲೆಯಿಂದ ಬಂದ ಜನರು ಸಿಎಂಗೆ ಅಹವಾಲು ಸಲ್ಲಿಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ, ಇದು ರಾಜ್ಯ ಮಟ್ಟದ ಕಾರ್ಯಕ್ರಮವಾಗಿದೆ. ಕಳೆದ ಬಾರಿ 5 ಸಾವಿರ ಅರ್ಜಿಗಳು ಬಂದಿದ್ದವು. ಅದರಲ್ಲಿ ಶೇಕಡ 89ರಷ್ಟು ಕೆಲಸ ಆಗಿದೆ. ಮೂರು ತಿಂಗಳೊಳಗೆ ಅರ್ಜಿಗಳು ಇತ್ಯರ್ಥಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾನೂನು ರೀತಿ ಆಗದಿದ್ದರೆ ಹಿಂಬರಹ ಬರೆದುಕೊಂಡುವಂತೆ ಹೇಳಿದ್ದೇನೆ ಎಂದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.  ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದರು. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು.  ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅಸಮಾನತೆ ನಿವಾರಿಸುವ ಕಾರ್ಯಕ್ರಮ ಅಂತಾ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!