ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಗಳಾದ ನರೇಶ, ಶ್ರವಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನ ಜೂನ್ 2ಕ್ಕೆ ಮುಂದೂಡಲಾಗಿದೆ.
ಎಸ್ಐಟಿ ಅಧಿಕಾರಿಗಳು ಆರೋಪಿಗಳ ವಿರುದ್ಧ ಆಕ್ಷೇಪಣಾ ಅರ್ಜಿ ಸಲ್ಲಿಸಲು ಸಮಯಾವಕಾಶ ಕೋರಿದ್ದಾರೆ. ಹೀಗಾಗಿ 91ನೇ ಸಿಟಿ ಸಿವಿಲ್ ಕೋರ್ಟ್ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದೆ.