ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಧ್ಯ ಸರಳ ಹಾಗೂ ಕಳಂಕ ರಹಿತ ಶಾಸಕರಾಗಿ ಕೆಲಸ ಮಾಡಿದವರು ಯಾರಾದರೂ ಇದ್ದರೆ ಅದು ಕಡೂರು ಮಾಜಿ ಶಾಸಕ ವೈ.ಎಸ್ ವಿ ದತ್ತ ಎಂದು ಹೇಳಲಾಗುತ್ತೆ. ಮೇಷ್ಟ್ರು ಅಂತಾನೆ ಕರೆಸಿಕೊಳ್ಳುವ ಮಾಜಿ ಶಾಸಕರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗುತ್ತಿದೆ.
ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದು, ಡಿಸೆಂಬರ್ 17ರಂದು ಬೆಳ್ತಂಗಡಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ‘ಕೈ’ ಹಿಡಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.