‘ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂದಕ್ಕೆ’

153

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದಿನಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ ನಡೆಯಲಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಹೊರವಲಯದಲ್ಲಿ ಮಧ್ಯಾಹ್ನ ಸಮಾವೇಶ ನಡೆಯಲಿದೆ. ಇದೆ ವೇಳೆ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಎನ್ನಲಾಗಿತ್ತು. ಆದರೆ, ಇದೀಗ ಅದು ಮುಂದೂಡಲಾಗಿದೆ.

ಹೌದು, ಕುಮಾರಸ್ವಾಮಿ ಸಹೋದರ, ಮಾಜಿ ಸಚಿವ ಎಚ್.ಡಿ ರೇವಣ್ಣ, ತಕರಾರರು ತೆಗೆದಿದ್ದಾರೆ. ಅವರು ನಮ್ಮ ಪಕ್ಷದ ಜ್ಯೋತಿಷಿ. ಇಂದು ಸಮಯ ಸರಿಯಿಲ್ಲ ಎಂದು ತಕರಾರು ಮಾಡಿದ್ದು, ಮುಂದಿನಗಳಲ್ಲಿ ಸೂಕ್ತ ಸಮಯ ನೋಡಿಕೊಂಡು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!