ಶುಕ್ರವಾರ ಮನಗೂಳಿ ಅಂತ್ಯಕ್ರಿಯೆ..

415

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಜನಪ್ರಿಯ ಜೆಡಿಎಸ್ ಶಾಸಕ ಎಂ.ಸಿ ಮನಗೂಳಿ ಅವರು ಬಧುವಾರ ತಡರಾತ್ರಿ ನಿಧನರಾಗಿದ್ದಾರೆ. 85 ವರ್ಷದ ಹಿರಿಯ ಸಜ್ಜನ ರಾಜಕಾರಣಿಗೆ ಕಳೆದ 15 ದಿನಗಳ ಹಿಂದೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ರು.

ಜನವರಿ 9ರಂದು ಕಲಬುರ್ಗಿಯಿಂದ ಬೆಂಗಳೂರಿಗೆ ಏರ್ ಆಂಬ್ಯುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತು. ಹೀಗೆ ಕಳೆದ 15 ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯ ಸುಧಾರಣೆಗೆ ಎಲ್ಲರೂ ಪ್ರಾರ್ಥಿಸಿದ್ರು. ಆದ್ರೆ, ಅದು ಕೊನೆಗೂ ಈಡೇರಲಿಲ್ಲ.

ಬೆಂಗಳೂರಿನಿಂದ ಇಂದು ಮಧ್ಯಾಹ್ನ ಸಿಂದಗಿಗೆ ಮೃತದೇಹ ಆಗಮಿಸಲಿದ್ದು, ಹೆಚ್.ಜಿ ಕಾಲೇಜಿನ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಯ ನಂತರ ಅಂತ್ಯಕ್ರಿಯೆಯ ವಿಧಿ ವಿಧಾನಗಳು ನಡೆಯಲಿವೆ ಎಂದು ಅವರು ಕುಟುಂಬದ ಆಪ್ತರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!