ಶಾಸಕ ಸುರೇಶಗೌಡರಿಗೆ ಕರೋನಾ ದೃಢ

275

ಪ್ರಜಾಸ್ತ್ರ ಸುದ್ದಿ

ನಾಗಮಂಗಲ: ಜೆಡಿಎಸ್ ಶಾಸಕ ಸುರೇಶಗೌಡ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ. ತಲೆನೋವು, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಗಸ್ಟ್ 1 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗಂಟಲು ದ್ರವವನ್ನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ಸೋಂಕು ಇರುವುದು ಧೃಡ ಪಟ್ಟಿದೆ.

ಇನ್ನು ಶಾಸಕರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರು ಚಾಲಕನಿಗೂ ಸೋಂಕು ದೃಢ ಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಸಕ ಸುರೇಶಗೌಡ ತಾವೇ ಖುದ್ದು ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪತ್ನಿ ಮತ್ತು ಮಕ್ಕಳು ಬೆಂಗಳೂರಿನ ಮನೆಯಲ್ಲಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!