ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್

233

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಅವರ ಸಂಸದ ಸ್ಥಾನವನ್ನು ಅಸಿಂಧುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ.

ಚುನಾವಣೆ ಸಂದರ್ಭದಲ್ಲಿ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪ ಎದುರಿಸುತ್ತಿದ್ದರು. ಈ ಸಂಬಂಧ 2019ರಲ್ಲಿ ಅವರ ವಿರುದ್ಧ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ನಲ್ಲಿ ವಿಚಾರಣೆಗೆ ಬಂದಾಗ ಅವರ ಸ್ಥಾನವನ್ನು ಅನರ್ಹತೆಗೊಳಿಸಿ ಆದೇಶಿಸಲಾಗಿದೆ.

2018ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಜಯಗಳಿಸಿದ್ದರು. ಇವರ ವಿರುದ್ಧ ಸೋಲು ಕಂಡಿದ್ದ ಬಿಜೆಪಿಯ ಅರಕಲಗೂಡು ಮಂಜು ಅವರು, ಅಫಿಡವಿಟ್ ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಹೇಳಿ ದೂರು ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಸಂಸದ ಸ್ಥಾನ ಅಸಿಂಧುಗೊಳಿಸಿದೆ. ಪ್ರಜ್ವಲ್ ರೇವಣ್ಣ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!