ರಾಜ್ಯ-ಕೇಂದ್ರ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

326

ಬೆಂಗಳೂರು: ನಾಡಿನಲ್ಲಿ ಉಂಟಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ನೀಡುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಅವರ ನೇತೃತ್ವದಲ್ಲಿ, ಶೇಷಾದ್ರಿ ರಸ್ತೆಯ ಮಹಾತ್ಮ ಗಾಂಧಿ ಪ್ರತಿಮೆಯಿಂದ ಸ್ವಾತಂತ್ರ್ಯ ಉದ್ಯಾನವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು. ಈ ವೇಳೆ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ನೀಡಲಾಗಿದ್ದ ಅನುದಾನ ಕಡಿತಗೊಳಿಸಿರುವುದನ್ನ ಖಂಡಿಸಲಾಯ್ತು.

ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಷ್ಟ್ರೀಯ ವಕ್ತಾರ ರಮೇಶ ಬಾಬು, ಪ್ರಚಾರ ಸಮಿತಿಯ ಅಧ್ಯಕ್ಷ ವೈ.ಎಸ್ ವಿ ದತ್ತ, ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ ಸೇರಿದಂತೆ ಹಲವರು ಭಾಗವಹಿಸಿದ್ರು.


TAG


Leave a Reply

Your email address will not be published. Required fields are marked *

error: Content is protected !!