ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಲಿಪಾಟೀಲ

250

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಪ್ರದೀಪಗೌಡ ಮಾಲಿಪಾಟೀಲ ಹೇಳಿದ್ದಾರೆ. ದಶಕಗಳಿಂದ ನಿಷ್ಠಾವಂತ ಕಾರ್ಯಕರ್ತನಾಗಿದ್ರೂ ಸೂಕ್ತ ಸ್ಥಾನಮಾನ ನೀಡದ ಕಾರಣಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.

ಕುಮಾರಸ್ವಾಮಿ ಅವರು ಬಕೆಟ್ ಹಿಡಿಯೋರು, ಕಿವಿ ಕಡಿಯುವವರಿಗೆ ಮಾತ್ರ ಸ್ಥಾನಮಾನ ನೀಡಲಾಗುತ್ತೆ. ಎರಡು ಬಾರಿ ವಿಧಾನಸಭೆ ಚುನಾವಣೆಗೆ ನಿಂತಾಗಲೂ ವರಿಷ್ಠರು ಬೆಂಬಲಕ್ಕೆ ನಿಲ್ಲಲಿಲ್ಲ ಎಂದು ಕಿಡಿ ಕಾರಿದ್ದಾರೆ. ಉತ್ತರ ಕರ್ನಾಟಕವನ್ನ ದೇವೇಗೌಡರು, ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಎಚ್.ಕೆ ಕುಮಾರಸ್ವಾಮಿ ಅವರು ನಿರ್ಲಕ್ಷ್ಯಿಸಿದ್ದಾರೆ. ಹೀಗಾಗಿ ಪಕ್ಷ ಬೆಳೆಯುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ರು.

ಉಪಾಧ್ಯಕ್ಷ ಸ್ಥಾನದ ಜೊತೆಗೆ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಬಹುತೇಕ ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!