ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಆದ್ಯತೆ

153

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಕೆಲಸ ನೀಡಬೇಕು ಅನ್ನೋದು ಸೇರಿದಂತೆ 3 ಹಂತದಲ್ಲಿ ನಿಯಮಗಳನ್ನು ಸರೋಜನಿ ಮಹಿಷಿ ವರದಿಯಲ್ಲಿದೆ. ಆದರೆ, ಇದುವರೆಗೂ ಜಾರಿಯಾಗಿಲ್ಲ. ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮಾತನಾಡಿದ್ದು, ಶಿಕ್ಷಣ ಹಾಗೂ ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡ 70ರಷ್ಟು ನೀಡುವ ಉದ್ದೇಶ ಹೊಂದಲಾಗಿದೆ ಎಂದಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ  ಪಡೆಯಲು ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಮುಂದಿನ ತಿಂಗಳು ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಕನ್ನಡಿಗರಿಗೆ ಶೇಕಡ 70ರಷ್ಟು ಉದ್ಯೋಗ ನೀಡುವ ಕಾನೂನು ಉಲ್ಲಂಘಿಸುವ ಉದ್ಯಮಗಳಿಗೆ ರಾಜ್ಯ ಸರ್ಕಾರ ನೀಡುವ ರಿಯಾತಿ, ಸೌಲಭ್ಯ ಕಡಿತಗೊಳಿಸಲಾಗುವುದು ಅಂತಾ ತಿಳಿಸಿದ್ದಾರೆ.

ಈ ಸಂಬಂಧ ಸಾಕಷ್ಟು ಹೋರಾಟವನ್ನು ಕನ್ನಡಿಗರು ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಇದುವರೆಗೂ ಜಾರಿಯಾಗಿಲ್ಲ. ಇದರ ಪರಿಣಾಮ ಕನ್ನಡಿಗರು ಪರ ರಾಜ್ಯ, ಪರದೇಶಗಳಿಗೆ ಹೋಗುತ್ತಿದ್ದಾರೆ. ಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ಸಿಕ್ಕರೆ ಬಹುದೊಡ್ಡ ಅನುಕೂಲವಾಗಲಿದೆ.




Leave a Reply

Your email address will not be published. Required fields are marked *

error: Content is protected !!