ಹಿರಿಯ ಪತ್ರಕರ್ತ ಮುರಗೇಶ ಹಿಟ್ಟಿ ನಿಧನ

463

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಹಿರಿಯ ಪತ್ರಕರ್ತ ಮುರಗೇಶ(49) ಹಿಟ್ಟಿ ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಪಟ್ಟಣದ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತರು ತಂದೆ, ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳನ್ನು ಅಗಲಿದಿದ್ದಾರೆ. ಮಲಘಾಣ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ಭಾನುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು. ಮುರಗೇಶ ಹಿಟ್ಟಿ ನಿಧನಕ್ಕೆ ಸಹೋದ್ಯೋಗಿಗಳು, ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ ಸೇರಿದಂತೆ ಬಂಧು ಬಳಗ, ಸ್ನೇಹಿತರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!