ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಮುಂಬೈ: 5ಜಿ ನೆಟ್ ವರ್ಕ್ ಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜೂಹಿ ಚಾವ್ಲಾ ಸಲ್ಲಿಸಿದ್ದ ಅರ್ಜಿಯನ್ನ ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅಲ್ದೇ, ಅವರಿಗೆ 20 ಲಕ್ಷ ರೂಪಾಯಿ ದಂಡ ವಿಧಿಸಿದೆ.
ನಟಿ ಜೂಹಿ ಚಾವ್ಲಾ ದೇಶದಲ್ಲಿ 5ಜಿ ನೆಟ್ ವರ್ಕ್ ಜಾರಿಗೊಳಿಸಬಾರದು. ಈ ಬಗ್ಗೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ರು. ಆದ್ರೆ, ಈ ಅರ್ಜಿ ದೋಷಯುಕ್ತವಾಗಿದೆ. ಮಾಧ್ಯಮಗಳಲ್ಲಿ ಪ್ರಚಾರ ಪಡೆಯುವ ಉದ್ದೇಶ ಹೊಂದಿದೆ. ಕೋರ್ಟ್ ಸಮಯ ವ್ಯರ್ಥ ಮಾಡಿದ್ದಕ್ಕೆ 20 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ನ್ಯಾಯಮೂರ್ತಿ ಜಿ.ಆರ್ ಮಿಧಾ ಹೇಳಿದ್ದಾರೆ.
ಅರ್ಜಿದಾರರು ತಮ್ಮ ಹಕ್ಕುಗಳಿಗಾಗಿ ಮೊದಲು ಸರ್ಕಾರವನ್ನ ಸಂಪರ್ಕಿಸಬೇಕಿತ್ತು. ಒಂದು ವೇಳೆ ಸರ್ಕಾರ ನಿರಾಕರಿಸಿದ್ರೆ ಕೋರ್ಟ್ ಗೆ ಬರಬೇಕಿತ್ತು ಎಂದಿದ್ದಾರೆ. ಇನ್ನು ಹೈಕೋರ್ಟ್ ಆದೇಶವನ್ನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಹೋಗುವುದಾಗಿ ನಟಿ ಜೂಹಿ ಚಾವ್ಲಾ ಹೇಳಿದ್ದಾರೆ.