ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಅರಾಧೆ

421

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಲೋಕ್ ಅರಾಧೆ ಅವರನ್ನು ನೇಮಕ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ಥಿ ಅವರ ಅವಧಿ ಜುಲೈ 3ಕ್ಕೆ ಮುಗಿಯಲಿದೆ. ಹೀಗಾಗಿ ಅವರ ಸ್ಥಾನಕ್ಕೆ ಅರಾಧೆಯವರನ್ನು ನೇಮಕ ಮಾಡಲಾಗಿದೆ.

ಈ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ಹೈಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!