ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

257

ಪ್ರಜಾಸ್ತ್ರ ಸುದ್ದಿ

ಮೈಸೂರು: ಸಾರಿಗೆ ನೌಕರರ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇದರ ಪರಿಣಾಮ ಪದವಿ, ವೃತ್ತಿಪರ ಕೋರ್ಸ್ ಗಳ ಮೇಲೆ ಬಿದ್ದಿದೆ. ಹೀಗಾಗಿ ಏಪ್ರಿಲ್ 11ರಂದು ನಡೆಯಬೆಕಿದ್ದ ಕೆ-ಸೆಟ್ ಪರೀಕ್ಷೆಯನ್ನ ಮುಂದೂಡಲಾಗಿದೆ.

ಸಾರಿಗೆ ನೌಕರರ ಮುಷ್ಕರದ ಬಗ್ಗೆ ಯಾವುದೇ ರೀತಿಯ ಸ್ಪಷ್ಟವಾದ ಮಾಹಿತಿ ಸಿಗುತ್ತಿಲ್ಲ. ಇದು ನಾಳೆಯೂ ಮುಂದುವರೆದ್ರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಹೀಗಾಗಿ ಪರೀಕ್ಷೆ ಮುಂದೂಡಲಾಗಿದ್ದು, ಮುಂದಿನ ದಿನಾಂಕ ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮೈಸೂರು ವಿವಿ ಕುಲಪತಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!