ಕೆ-ಸೆಟ್ ಪರೀಕ್ಷೆ ಮರು ದಿನಾಂಕ ನಿಗದಿ

210

ಪ್ರಜಾಸ್ತ್ರ ಸುದ್ದಿ

ಮೈಸೂರು: ಏಪ್ರಿಲ್ 11ರಂದು ಆಯೋಜಿಸಲಾಗಿದ್ದ ಮೈಸೂರು ವಿಶ್ವವಿದ್ಯಾಲಯದ ಕೆ-ಸೆಟ್ ಪರೀಕ್ಷೆಯನ್ನ ಮುಂದೂಡಲಾಗಿತ್ತು. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಕೆ-ಸೆಟ್ ಪರೀಕ್ಷೆ ಮುಂದೂಡಲಾಗಿತ್ತು. ಇದೀಗ ಮರು ದಿನಾಂಕ ನಿಗದಿ ಮಾಡಲಾಗಿದೆ.

ಏಪ್ರಿಲ್ 25, 2021 ಭಾನುವಾರದಂದು ಕೆ-ಸೆಟ್ ಪರೀಕ್ಷೆಯ ಮರು ದಿನಾಂಕ ನಿಗದಿ ಮಾಡಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ ತಿಳಿಸಲಾಗಿದ್ದು, ಪರೀಕ್ಷೆಯನ್ನ ಸೂತ್ರವಾಗಿ ನಡೆಸಲು ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!