ನಿಯಮ ಉಲ್ಲಂಘನೆ, ಜೆಟ್ ಲ್ಯಾಗ್ ಪಬ್ 25 ದಿನ ಕ್ಲೋಸ್

197

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕಾಟೇರ ಚಿತ್ರದ ಯಶಸ್ಸಿನ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿನ ಓರಾಯನ್ ಮಾಲ್ ನಲ್ಲಿರುವ ಜೆಟ್ ಲ್ಯಾಗ್ ಪಬ್ ನಲ್ಲಿ ಚಿತ್ರ ತಂಡ ಜನವರಿ 3ರ ರಾತ್ರಿ ಪಾರ್ಟಿ ಮಾಡಿದೆ. ಈ ವೇಳೆ ನಿಯಮ ಉಲ್ಲಂಘಿಸಿ ಬೆಳಗಿನಜಾವದ ತನಕ ಪಾರ್ಟಿ ಮಾಡಲಾಗಿದೆ ಎಂದು ಕೇಸ್ ದಾಖಲಾಗಿದೆ.

ಈ ಸಂಬಂಧ ನಟ ದರ್ಶನ್, ನಿರ್ದೇಶಕ ತರುಣ್ ಸುಧೀರ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟರಾದ ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಚಿಕ್ಕಣ್ಣ, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಪೊಲೀಸ್ ವಿಚಾರಣೆಗೆ ಕಳೆದ ಶುಕ್ರವಾರ ಹಾಜರಾಗಿದ್ದರು.

ಪಬ್ ಮಾಲೀಕರಾದ ಶಶಿರೇಖಾ ಜಗದೀಶ್ ಹಾಗೂ ವ್ಯವಸ್ಥಾಪಕ ಪ್ರಶಾಂತ್ ವಿರುದ್ಧ ಅಬಕಾರಿ ಕಾಯ್ದೆ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಜೆಟ್ ಲ್ಯಾಬ್ ಪಬ್ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದ್ದು, 25 ದಿನಗಳ ಕಾಲ ಪರವಾನಿಗೆ ರದ್ದುಗೊಳಿಸಲಾಗಿದೆ. ಮೊದಲ ಬಾರಿಗೆ ದೂರು ದಾಖಲಾದ ಹಿನ್ನಲೆಯಲ್ಲಿ 25 ದಿನ ಪರವಾನಿಗೆ ರದ್ದು ಮಾಡಲಾಗಿದೆ. ಮೂರು ಬಾರಿ ನಿಯಮ ಉಲ್ಲಂಘಿಸಿದರೆ ಸಂಪೂರ್ಣ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!